ಅಮಿತಾಬ್ ಸೊಸೆ, ಮೊಮ್ಮಗಳಿಗೆ ಸೋಂಕು

July 13, 2020

ಮುಂಬೈ ಜು.13 : ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಸೊಸೆ, ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅವರ ಪುತ್ರಿ ಆರಾದ್ಯಾ ಬಚ್ಚನ್ ಅವರಿಗೂ ಕೊರೋನಾ ವಕ್ಕರಿಸಿದೆ.
ಅಮಿತಾಬ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್ ಅವರಿಗೆ ಈಗಾಗಲೇ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಅವರನ್ನು ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪತಿ ಹಾಗೂ ಮಾವನಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಐಶ್ವರ್ಯ, ಪುತ್ರಿ ಆರಾಧ್ಯಾ ಹಾಗೂ ಅತ್ತೆ ಜಯಾ ಬಚ್ಚನ್ ಅವರಿಗೂ ಕೊರೋನಾ ಪರೀಕ್ಷೆ ನಡೆಸಲಾಗಿತ್ತು. ಇದೀಗ ಮೂವರ ವರದಿ ಬಂದಿದ್ದು, ಐಶ್ವರ್ಯಾ ಹಾಗೂ ಆರಾಧ್ಯಾಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಜಯಾ ಬಚ್ಚನ್ ಅವರಿಗೆ ನೆಗಟಿವ್ ಬಂದಿದೆ.
ಈ ನಡುವೆ ಅಮಿತಾಭ್ ಬಚ್ಚನ್ ಅವರ ಆರೋಗ್ಯ ಸ್ಥಿರವಾಗಿದೆ. ಸೌಮ್ಯ ಲಕ್ಷಣಗಳಷ್ಟೇ ಕಂಡು ಬಂದಿದೆ. ಪ್ರಸ್ತುತ ಆಸ್ಪತ್ರೆಯ ಐಸೋಲೇಷನ್ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

error: Content is protected !!