ಸೋಂಕು ಲಕ್ಷಣ ಕಂಡು ಬಂದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರದಿ ಮಾಡಿ

July 13, 2020

ಮಡಿಕೇರಿ ಜು.13 : ಸಂಪರ್ಕ ತಡೆಯಲ್ಲಿ ಇರುವವರಿಗೆ ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಸ್ಥಳೀಯ ಕಾರ್ಯ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರದಿ ಮಾಡಿಕೊಳ್ಳಬೇಕು ಎಂದು ಕೊಡಗು ಜಿಲ್ಲಾಡಳಿತ ತಿಳಿಸಿದೆ. ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ನಗರಸಭೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಮತ್ತು ಈಗಾಗಲೇ ಜನಪ್ರತಿನಿಧಿಗಳನ್ನು ಒಳಗೊಂಡಂತೆ ರಚಿತವಾಗಿರುವ ಗ್ರಾಮ ಮಟ್ಟದ ಟಾಸ್ಕ್ ಫೋರ್ಸ್ ಮೇಲಿನ ವಿಚಾರಗಳ ಬಗ್ಗೆ ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.