ಪೊಲೀಸ್ ಸಿಬ್ಬಂದಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಾಗಿದೆ

13/07/2020

ಮಡಿಕೇರಿ ಜು.13 : ಕೊಡಗು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳ ಆರೋಗ್ಯದ ಬಗ್ಗೆ ಪೊಲೀಸ್ ಇಲಾಖೆ ತೀವ್ರ ಕಾಳಜಿಯನ್ನು ತೋರಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ತಿಳಿಸಿದ್ದಾರೆ. ಪ್ರಥಮ ಹಂತದಲ್ಲಿ ಈಗಾಗಲೇ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಕೋವಿಡ್-19 ಪರೀಕ್ಷೆಯನ್ನು ನಡೆಸಲಾಗಿದ್ದು, ಒಂದು ಪ್ರಕರಣ ಮಾತ್ರ ಪಾಸಿಟಿವ್ ವರದಿಯಾಗಿದೆ.
ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ ಕರ್ತವ್ಯ ನಿರ್ವಹಿಸುವಂತೆ ಎಸ್ ಪಿ ಧೈರ್ಯ ತುಂಬಿದ್ದಾರೆ.