ರಾಜ್ಯದಲ್ಲಿ ಕೊರೋನಾ ಆರ್ಭಟ : ಜಿಲ್ಲಾಧಿಕಾರಿಗಳಿಗೆ ಪೂರ್ಣ ಅಧಿಕಾರ

13/07/2020

ಬೆಂಗಳೂರುಜು.13:- ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿರುವುದರಿಂದ ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಮಾಣದಲ್ಲಿ ಕೊರೊನಾ ಏರುಗತಿಯಲ್ಲಿ ಸಾಗುತ್ತಿದೆ ಎಂಬುದನ್ನು ಆಧರಿಸಿ ನೀವೆ ಅಂತಿಮ ನಿರ್ಧಾರ ತೆಗೆದುಕೊಳ್ಳಿ ಎಂದು ಆಯಾಯ ಜಿಲ್ಲಾಧಿಕಾರಿಗಳಿಗೆ ಸಿಎಂ ಅಧಿಕಾರ ನೀಡಿದ್ದಾರೆ.

ಇಂದು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ನಾನು ಯಾರಿಗೂ ಲಾಕ್‌ಡೌನ್‌ ಮಾಡಿ ಎಂದು ಹೇಳಲ್ಲ, ಏಕೆಂದರೆ ಲಾಕ್‌ಡೌನ್‌ನಿಂದ ಯಾವುದೇ ಪ್ರಯೋಜವಾಗುವುದಿಲ್ಲ, ಹೀಗಾಗಿ ನಿಮ್ಮ ವಿವೇಚನೆಗೆ ಬಿಟ್ಟಿದ್ದು ಅಲ್ಲಿ ಪರಿಸ್ಥಿತಿ ಆಧರಿಸಿ ನೀವೆ ಕ್ರಮ ಜರುಗಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಲಾಕ್‌ಡೌನ್‌ ಬೇಕೆ ಬೇಡವೇ ಎಂಬ ಬಗ್ಗೆ ಚರ್ಚಿಸಿದ ಬಳಿಕ ಜಿಲ್ಲಾಧಿಕಾರಿಗಳಿಗೆ ಲಾಕ್‌ಡೌನ್‌ ಮಾಡುವ ಅಧಿಕಾರಿ ನೀಡಿದ್ದು, ಮುಂದಿನ ನಿರ್ಧಾರ ತೆಗೆದುಕೊಳ್ಳುವ ಅಧಿಕಾರವನ್ನು ನಿಮಗೆ ನೀಡುತ್ತಿದ್ದು ನೀವೇ ಅಂತಿಮ ಕ್ರಮ ಜರುಗಿಸಿ ಎಂದು ತಿಳಿಸಿದ್ದಾರೆ.

ಹೀಗಾಗಿ ತಮ್ಮ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿನ ತೀವ್ರತೆಯನ್ನು ಆಧರಿಸಿ ಜಿಲ್ಲಾಧಿಕಾರಿಗಳು ಅಂತಿಮ ನಿರ್ಧಾರ ತೆಗೆದುಕೊಳ್ಳಬಹುದು. ಜತೆಗೆ ಜಿಲ್ಲೆಯ ಸಮಸ್ತ ಜನರ ಜೀವ ಜೀವನವನ್ನು ಗಮನದಲ್ಲಿಟ್ಟುಕೊಂಡು ಕ್ರಮ ಜರುಗಿಸಲಿದ್ದಾರೆ. ಅದಕ್ಕೆ ಸಿಎಂ ಯಡಿಯೂರಪ್ಪ ಸಮ್ಮತಿ ಸೂಚಿಸಿದ್ದಾರೆ.