ಮುಂಬಡ್ತಿ ಹೊಂದಿದ ಕೊಡಗು ಪೊಲೀಸ್ ಅಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ

13/07/2020

ಮಡಿಕೇರಿ ಜು.13 : ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಎ.ಎಸ್.ಐ ಮತ್ತು ಹೆಚ್.ಸಿ ಹುದ್ದೆಗಳಿಗೆ ಮುಂಬಡ್ತಿ ಹೊಂದಿ ಜಿಲ್ಲೆಯ ವಿವಿಧ ಠಾಣೆಗಳಿಗೆ ನಿಯೋಜನೆಗೊಂಡ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಮುಂಬಡ್ತಿ ಪ್ರದಾನ ಮಾಡಿ ಅಭಿನಂದಿಸಲಾಯಿತು.
ಈ ಸಂದರ್ಭ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಅವರು ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಸನ್ಮಾನಿಸಿ ಗೌರವಿಸಿದರು.