ಕೊಡಗಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 184 ಕ್ಕೆ ಏರಿಕೆ : ಲಾಕ್ ಡೌನ್ ಗೆ ಜನರ ಒಲವು

13/07/2020

ಮಡಿಕೇರಿ ಜು.13 : ಜಿಲ್ಲೆಯಲ್ಲಿ ಇಂದು ಹೊಸದಾಗಿ 15 ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಸೋಮವಾರಪೇಟೆ ತಾಲ್ಲೂಕು, ಕೊಡ್ಲಿಪೇಟೆ ಹೋಬಳಿಯ ನೀರುಗುಂದ ಗ್ರಾಮದ ಜ್ವರ ಲಕ್ಷಣಗಳಿದ್ದ 36 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಸೋಮವಾರಪೇಟೆ ತಾಲ್ಲೂಕು ಕಾರೆಕೊಪ್ಪದ ಜ್ವರ ಲಕ್ಷಣಗಳಿದ್ದ 41 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ. ಸೋಮವಾರಪೇಟೆ ತಾಲ್ಲೂಕು ಕಕ್ಕೆಹೊಳೆಯ ಜ್ವರ ಲಕ್ಷಣಗಳಿದ್ದ 25 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ. ಸೋಮವಾರಪೇಟೆ ತಾಲ್ಲೂಕು ಶನಿವಾರಸಂತೆ ಹೋಬಳಿ ಗೋಪಾಲಪುರದ ಜ್ವರ ಲಕ್ಷಣಗಳಿದ್ದ 25 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ.
ಸೋಮವಾರಪೇಟೆ ತಾಲ್ಲೂಕು, ಚೇರಳ ಶ್ರೀಮಂಗಲದ ಜ್ವರ ಲಕ್ಷಣಗಳಿದ್ದ 62 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಸೋಮವಾರಪೇಟೆ ತಾಲ್ಲೂಕು, ಸುಂಟಿಕೊಪ್ಪದ ಎಮ್ಮೆಗುಂಡಿ ರಸ್ತೆಯ ಜ್ವರ ಲಕ್ಷಣಗಳಿದ್ದ 59 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಮಡಿಕೇರಿ ಪಟ್ಟಣದ ಗದ್ದುಗೆ ಬಳಿಯ ಜ್ವರ ಲಕ್ಷಣಗಳಿದ್ದ 28 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಸೋಮವಾರಪೇಟೆ ತಾಲ್ಲೂಕು ಕುಶಾಲನಗರದ, ಬೈಚನಹಳ್ಳಿಯ ಜ್ವರ ಲಕ್ಷಣಗಳಿದ್ದ 25 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ.
ಸೋಮವಾರಪೇಟೆ ತಾಲ್ಲೂಕು, ಕುಶಾಲನಗರದ ಕೋಣಮಾರಿಯಮ್ಮ ದೇವಸ್ಥಾನ ಬಳಿಯ ಜ್ವರ ಲಕ್ಷಣಗಳಿದ್ದ 56 ವರ್ಷದ ಮಹಿಳೆಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ಸೋಮವಾರಪೇಟೆ ತಾಲ್ಲೂಕು, ಶನಿವಾರಸಂತೆ ಹೋಬಳಿ, ಗೋಪಾಲಪುರ ನಿವಾಸಿ ಬೆಂಗಳೂರು ಪ್ರಯಾಣದ ಇತಿಹಾಸವಿರುವ 24 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ.
ವಿರಾಜಪೇಟೆ ತಾಲ್ಲೂಕು ಪಾಲಿಬೆಟ್ಟ ಗ್ರಾಮದಲ್ಲಿ ಈ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ 22 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.
ಸೋಮವಾರಪೇಟೆ ತಾಲ್ಲೂಕು ತೊರೆನೂರು ಗ್ರಾಮದಲ್ಲಿ ಈ ಹಿಂದೆ ಸೋಂಕು ದೃಢಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕವಾದ 85 ವರ್ಷದ ಮಹಿಳೆಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ವಿರಾಜಪೇಟೆ ತಾಲ್ಲೂಕು, ಗೋಣಿಕೊಪ್ಪದ ಅರವತ್ತೊಕ್ಲುವಿನ ಮೈಸೂರಮ್ಮ ಕಾಲೋನಿಯ 18 ವರ್ಷದ ಹುಡುಗನೊಬ್ಬನಿಗೆ ಸೋಂಕು ದೃಢಪಟ್ಟಿದೆ.
ಸೋಮವಾರಪೇಟೆ ತಾಲ್ಲೂಕು ಕಂಡಕೆರೆ, ಚೆಟ್ಟಳ್ಳಿ ಗ್ರಾಮದ ಆರೋಗ್ಯ ಕಾರ್ಯಕರ್ತರೊಬ್ಬರ 18 ವರ್ಷದ ಮಗನಿಗೆ ಸೋಂಕು ದೃಢಪಟ್ಟಿದೆ. ಸೋಮವಾರಪೇಟೆ ತಾಲ್ಲೂಕು ಕುಶಾಲನಗರದ ಬಲಮುರಿ ದೇವಸ್ಥಾನ ಬಳಿಯ ಜ್ವರ ಲಕ್ಷಣಗಳಿದ್ದ 36 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಹೊಸದಾಗಿ 12 ನಿಯಂತ್ರಿತ ಪ್ರದೇಶಗಳನ್ನು ತೆರೆಯಲಾಗಿದೆ.

ನೀರುಗುಂದ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು, ಕಾರೆಕೊಪ್ಪ, ಸೋಮವಾರಪೇಟೆ ತಾಲ್ಲೂಕು, ಕಕ್ಕೆಹೊಳೆ, ಸೋಮವಾರಪೇಟೆ ತಾಲ್ಲೂಕು, ಗೋಪಾಲಪುರ, ಶನಿವಾರಸಂತೆ ಹೋಬಳಿ, ಸೋಮವಾರಪೇಟೆ ತಾಲ್ಲೂಕು, ಚೇರಳ ಶ್ರೀಮಂಗಲ, ಸೋಮವಾರಪೇಟೆ ತಾಲ್ಲೂಕು, ಎಮ್ಮೆಗುಂಡಿ ರಸ್ತೆ, ಸುಂಟಿಕೊಪ್ಪ, ಸೋಮವಾರಪೇಟೆ ತಾಲ್ಲೂಕು, ಗದ್ದುಗೆ, ಮಡಿಕೇರಿ ನಗರ, ಬೈಚನಹಳ್ಳಿ, ಕುಶಾಲನಗರ, ಸೋಮವಾರಪೇಟೆ ತಾಲ್ಲೂಕು, ಕೋಣ ಮಾರಿಯಮ್ಮ ದೇವಸ್ಥಾನ, ಕುಶಾಲನಗರ, ಸೋಮವಾರಪೇಟೆ ತಾಲ್ಲೂಕು, ಮೈಸೂರಮ್ಮ ಕಾಲೋನಿ, ಅರವತ್ತೊಕ್ಲು, ಗೋಣಿಕೊಪ್ಪ, ಕಂಡಕೆರೆ, ಚೆಟ್ಟಳ್ಳಿ ಗ್ರಾಮ, ಸೋಮವಾರಪೇಟೆ, ಬಲಮುರಿ ದೇವಸ್ಥಾನ ಬಳಿ, ಕುಶಾಲನಗರ, ಸೋಮವಾರಪೇಟೆ ತಾಲ್ಲೂಕು.
ಬೆಟ್ಟದಕಾಡು, ನೆಲ್ಲಿಹುದಿಕೇರಿ, ಸೋಮವಾರಪೇಟೆ ತಾಲ್ಲೂಕು, ಹೊಲಮಾಳ, ಚೆನ್ನಯ್ಯನಕೋಟೆ, ವಿರಾಜಪೇಟೆ ತಾಲ್ಲೂಕು, ಪಾಲಿಬೆಟ್ಟ, ವಿರಾಜಪೇಟೆ ತಾಲ್ಲೂಕು ಈ ಮೂರು ನಿಯಂತ್ರಿತ ಪ್ರದೇಶಗಳನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ.

ಜಿಲ್ಲೆಯ ಒಟ್ಟು ಒಟ್ಟು ಸೋಂಕಿತ ಪ್ರಕರಣಗಳು 184, ಒಟ್ಟು ಬಿಡುಗಡೆಗೊಂಡ ಪ್ರಕರಣಗಳು 68, ಒಟ್ಟು ಸಕ್ರಿಯ ಪ್ರಕರಣಗಳು 113, ಒಟ್ಟು ಮೃತಪಟ್ಟ ಪ್ರಕರಣಗಳು 03, ಒಟ್ಟು ನಿಯಂತ್ರಿತ ಪ್ರದೇಶಗಳು 77 ಆಗಿವೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.