ರಂಗ ತರಬೇತಿ ಡಿಪ್ಲೋಮೊ ಕೋರ್ಸ್‍ಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

13/07/2020

ಮಡಿಕೇರಿ ಜು.13 : ರಂಗಾಯಣದ ಭಾರತೀಯ ರಂಗಶಿಕ್ಷಣ ಕೇಂದ್ರದಿಂದ ಒಂದು ವರ್ಷದ ರಂಗ ತರಬೇತಿ ಡಿಪ್ಲೋಮೊ ಕೋರ್ಸ್‍ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಮೈಸೂರು ರಂಗಾಯಣದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ
ಮೈಸೂರು ರಂಗಾಯಣದ ಭಾರತೀಯ ರಂಗಶಿಕ್ಷಣ ಕೇಂದ್ರವು ನಡೆಸುವ ಒಂದು ವರ್ಷದ ರಂಗ ತರಬೇತಿ ಡಿಪ್ಲೋಮೊ ಕೋರ್ಸ್‍ನ ಅರ್ಜಿ ಪ್ರಕ್ರಿಯೆಗೆ ಕೋವಿಡ್-19 ರ ಸಂದರ್ಭದಲ್ಲಿ ಉಂಟಾಗಿರುವ ಅಂಚೆ ಅನಾನುಕೂಲತೆ ಮತ್ತು ಕರ್ನಾಟಕದಾದ್ಯಂತ ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳ ಕೋರಿಕೆ ಮೇರೆಗೆ ಅರ್ಜಿ ಸಲ್ಲಿಸಲು ಜುಲೈ 20 ರವರೆಗೆ ಕೊನೆಯ ದಿನಾಂಕವನ್ನು ವಿಸ್ತಾರಿಸಲಾಗಿದೆ. ಅರ್ಜಿ ಸಲ್ಲಿಕೆ ಸಂಬಂಧಿಸಿದಂತೆ ಎಲ್ಲಾ ವಿವರಗಳನ್ನು ರಂಗಾಯಣದ ವೆಬ್ ಸೈಟ್ www.rangayana.org ನಿಂದ ಎಂದಿನಂತೆ ಪಡೆಯಬಹುದಾಗಿದೆ ಎಂದು ಮೈಸೂರು ರಂಗಾಯಣದ ಜಂಟಿ ಸಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.