ವಿವಿಧ ಬೇಡಿಕೆಗಳ ಈಡೇರಿಕೆಗೆ ಸುಂಟಿಕೊಪ್ಪ ಆಶಾ ಕಾರ್ಯಕರ್ತೆಯರ ಒತ್ತಾಯ

13/07/2020

ಸುಂಟಿಕೊಪ್ಪ ಜು.13 : ಸುಂಟಿಕೊಪ್ಪ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳನ್ನು ಮುಂದಿರಿಸಿಕೊಂಡು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಪತ್ರ ಆರ್ಪಿಸಿದರು.
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹಾಗೂ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳನ್ನು ಮುಂದಿರಿಸಿಕೊಂಡು ಮಾಸಿಕ 12,000 ಗೌರವಧನ ಖಾತರಿಪಡಿಸಬೇಕು, ಕೊವೀಡ್-19 ವಿರುದ್ಧದ ಹೋರಾಟಕ್ಕೆ ಅಗತ್ಯವಿರುವಷ್ಟು ಸುರಕ್ಷಣಾ ಸಾಮಾಗ್ರಿಗಳನ್ನು ನೀಡಬೇಕು ಕೋವಿಡ್-19 ಸೋಂಕಿಗೆ ಒಳಗಾದ ಆಶಾಗೆ ಪರಿಹಾರ ಹಾಆಗೂ ಸಂಪರ್ಣ ಉಚಿತ ಚಿಕಿತ್ಸೆ ನೀಡಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಿದರು.
ಕೊರೊನಾ ವಾರಿಯರ್ಸ್‍ಗಳ ನ್ಯಾಯಯುತ ಬೇಡಿಕೆಗಳನ್ನು ಮುಖ್ಯಮಂತ್ರಿಗಳು ಈಡೇರಿಸಬೇಕು ಎಂದು ಒತ್ತಾಯಿಸಿದರು.