ಡಾ.ಅಂಬೇಡ್ಕರ್ ನಿವಾಸದ ಮೇಲೆ ದಾಳಿ : ವಿರಾಜಪೇಟೆ ದಲಿತ ಸಂಘರ್ಷ ಸಮಿತಿ ಖಂಡನೆ

13/07/2020

ವಿರಾಜಪೇಟೆ ಜು.13 : ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರ ನಿವಾಸದ ಮೇಲೆ ದಾಳಿ ಮಾಡಿ ಹಾನಿ ಉಂಟು ಮಾಡಿದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯ ವಿರಾಜಪೇಟೆ ಘಟಕ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿತು.

ಈ ಸಂಧರ್ಭ ಮಾತನಾಡಿದ ಸಮಿತಿಯ ತಾಲ್ಲೂಕು ಸಂಚಾಲಕ ವಿ.ಆರ್.ರಜನಿಕಾಂತ್ ಅವರು ಡಾ.ಅಂಬೇಡ್ಕರ್ ಅವರ ಗೌರವಕ್ಕೆ ಧಕ್ಕೆ ತರುವ ನೀಚ ಕೃತ್ಯ ಇದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪಟ್ಟಣ ಪಂಚಾಯಿತಿ ಸದಸ್ಯರಾದ ಡಿ.ಪಿ.ರಾಜೇಶ್, ಮೊಹಮ್ಮದ್ ರಾಫಿ, ಅಗಸ್ಟಿನ್ ಬೆನ್ನಿ, ಅಬ್ದುಲ್ ಜಲೀಲ್ ಮತ್ತು ಡಿ.ಎಸ್.ಎಸ್ ನ ವಿಧ್ಯಾರ್ಥಿ ಒಕ್ಕೂಟದ ಜಿಲ್ಲಾ ಸಂಚಾಲಕ ಹೆಚ್.ಬಿ.ಸತೀಶ್, ಪರಶುರಾಮ್, ಹೊನ್ನಯ್ಯ, ಮಲ್ಲಿಕಾರ್ಜುನ, ಕೃಷ್ಣಯ್ಯ, ಲೊಕೇಶ್ ಮತ್ತಿತರರು ಹಾಜರಿದ್ದರು.