ಬ್ರಹ್ಮಗಿರಿ ಅಭಯಾರಣ್ಯದಲ್ಲಿ ಕಾಡು ಹಂದಿ ಬೇಟೆ : ಇಬ್ಬರು ಆರೋಪಿಗಳ ಬಂಧನ

14/07/2020

ಮಡಿಕೇರಿ ಜು. 14 : ಬ್ರಹ್ಮಗಿರಿ ಅಭಯಾರಣ್ಯದಲ್ಲಿ ಕಾಡು ಹಂದಿಯನ್ನು ಬೇಟೆಯಾಡಿದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಂಧಿಸಿ ಮಾಂಸ ಮತ್ತು ಕೋವಿಯನ್ನು ವಶಪಡಿಸಿಕೊಂಡಿದ್ದಾರೆ.

ವಿರಾಜಪೇಟೆ ತಾಲ್ಲೂಕಿನ ಶ್ರೀಮಂಗಲ ವಲಯ ಅರಣ್ಯಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಬೋಪಯ್ಯ ಹಾಗೂ ನಂಬಿ ಎಂಬವರನ್ನು ಬಂಧಿಸಿದ್ದಾರೆ.