ಜು. 16 ರಂದು ವಿರಾಜಪೇಟೆ ವ್ಯಾಪ್ತಿಯಲ್ಲಿ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ
14/07/2020

ಮಡಿಕೇರಿ ಜು. 14 : ವಿರಾಜಪೇಟೆ ವ್ಯಾಪ್ತಿಯಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಜು. 16 ರಂದು ನಡೆಯಲಿದೆ.
ಆದ್ದರಿಂದ ವಿರಾಜಪೇಟೆ ಅರಣ್ಯ ವಲಯದ ವ್ಯಾಪ್ತಿಗೆ ಒಳಪಡುವ ಕೊಳತ್ತೋಡು, ಬೈಗೋಡು, ನಲ್ವತೋಕ್ಲು, ಹೊಸಕೋಟೆ, ಕಳತ್ಮಾಡು, ಗೊಟ್ಟಡ, ಹೊಸೂರು, ಬೆಟ್ಟಗೇರಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು, ತೋಟದ ಕಾರ್ಮಿಕರು ಎಚ್ಚರಿಕೆಯಿಂದ ಇರಲು ವಿರಾಜಪೇಟೆ ವಲಯ ಅರಣ್ಯಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
