ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 219ಕ್ಕೆ ಏರಿಕೆ

15/07/2020

ಮಡಿಕೇರಿ ಜು. 15 : ಕೊಡಗು ಜಿಲ್ಲೆಯಲ್ಲಿ ಇಂದು ಹೊಸದಾಗಿ 2 ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 219ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ವಿರಾಜಪೇಟೆ ತಾಲ್ಲೂಕು ಬಾಡಗ ಬಾಣಂಗಾಲ ಗ್ರಾಮದ ಹುಂಡಿ ಪ್ರದೇಶದಲ್ಲಿ ಈ ಹಿಂದೆ ಸೋಂಕು ದೃಢಪಟ್ಟ ಪ್ರಕರಣದ ಪ್ರಾಥಮಿಕ ಸಂಪರ್ಕವಾದ 19 ವರ್ಷದ ಹುಡುಗನಿಗೆ ಸೋಂಕು ದೃಢಪಟ್ಟಿದೆ.ಮೈಸೂರಿನ ಕೋವಿಡ್ ಸೋಂಕಿತರ ಪ್ರಾಥಮಿಕ ಸಂಪರ್ಕವಾದ ಸೋಮವಾರಪೇಟೆ ತಾಲ್ಲೂಕು ನಂಜರಾಯಪಟ್ಟಣದ ರಸೂಲ್ ಬೆಟ್ಟಗೇರಿ ಗ್ರಾಮದ ನಿವಾಸಿ 65 ವರ್ಷದ ಪುರುಷರೊಬ್ಬರಿಗೆ ಸೋಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 219 ಕ್ಕೇರಿದ್ದು, ಈ ಪೈಕಿ 87 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, ಮೂರು ಮಂದಿ ಸಾವಿಗೀಡಾಗಿದ್ದಾರೆ. 129 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಮಂಗಳವಾರ ಕೊಡಗು ಜಿಲ್ಲೆಯಲ್ಲಿ ಹೊಸದಾಗಿ 1 ನಿಯಂತ್ರಿತ ಪ್ರದೇಶಗಳನ್ನು ತೆರೆಯಲಾಗಿದ್ದು, ಇದರೊಂದಿಗೆ ನಿಯಂತ್ರಿತ ಪ್ರದೇಶಗಳ ಸಂಖ್ಯೆಯೂ 965ಕ್ಕೆ ಏರಿಕೆಯಾಗಿದೆ.