ಕೋವಿಡ್ ಆಸ್ಪತ್ರೆಯಲ್ಲಿ 120 ಮಂದಿಗೆ ಚಿಕಿತ್ಸೆ

16/07/2020

ಮಡಿಕೇರಿ ಜು.16 : ಕೊಡಗು ಜಿಲ್ಲಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ ಪ್ರಸ್ತುತ 120 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 238ಕ್ಕೇರಿದ್ದು, ಇವರಲ್ಲಿ 115 ಮಂದಿ ಗುಣಮಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 120 ಸಕ್ರಿಯ ಪ್ರಕರಣಗಳಿದ್ದು ಮೂರು ಮಂದಿ ಸಾವಿಗೀಡಾಗಿದ್ದಾರೆ. ನಿಯಂತ್ರಿತ ಪ್ರದೇಶಗಳ ಮೇಲೆ ನಿಗಾ ಇರಿಸಲು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿರುವವರಿಗೆ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗಿದೆ.