ವಿರಾಜಪೇಟೆ ತಾಲ್ಲೂಕಿನಲ್ಲಿ ಹೆಚ್ಚುತ್ತಲೇ ಇದೆ ಸೋಂಕಿತರ ಸಂಖ್ಯೆ

16/07/2020

ಮಡಿಕೇರಿ ಜು.16 : ವೀರಾಜಪೇಟೆ ತಾಲೂಕಿನ ವಿವಿಧೆಡೆಗಳಲ್ಲಿ ಗುರುವಾರ 8 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಗೋಣಿಕೊಪ್ಪದ ಅಚ್ಚಪ್ಪ ಲೇಔಟ್‍ನ ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿದ್ದ 23, 58 ಹಾಗೂ 63 ವರ್ಷದ ಮಹಿಳೆಯರು ಹಾಗೂ 57 ವರ್ಷದ ಪುರುಷನಲ್ಲಿ ಸೋಂಕು ದೃಢಪಟ್ಟಿದ್ದು, ವೀರಾಜಪೇಟೆ ತಾಲೂಕಿನ ಲಕ್ಕುಂದ ಗ್ರಾಮದ 20 ವರ್ಷದ ಮಹಿಳೆ, ಬೆಂಗಳೂರು ಪ್ರಯಾಣದ ಇತಿಹಾಸವಿರುವ ವೀರಾಜಪೇಟೆ ಅಪ್ಪಯ್ಯ ಸ್ವಾಮಿ ರಸ್ತೆಯ 26 ವರ್ಷದ ಮಹಿಳೆಯಲ್ಲಿ ಸೋಂಕು ಕಂಡುಬಂದಿದೆ.