ಸೋಮೇಂಗಡ ಗಣೇಶ್ ತಿಮ್ಮಯ್ಯಗೆ ಕೃಷಿ ಸಮ್ಮಾನ್ ಪ್ರಶಸ್ತಿ

16/07/2020

ಮಡಿಕೇರಿ ಜು.16 : ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ನಲ್ಲೂರು ಗ್ರಾಮದ ಕೃಷಿ ಪಂಡಿತ ವಿಜೇತ ಸೋಮೇಂಗಡ ಗಣೇಶ್ ತಿಮ್ಮಯ್ಯ ಅವರಿಗೆ ನವದೆಹಲಿಯ ಭಾರತೀಯ ಕೃಷಿ ಅನುಸಂಧಾನ ಪರಿಷತ್ ನ 92ನೇ ಸಂಸ್ಥಾಪನೆ ದಿನಾಚರಣೆ ಪ್ರಯುಕ್ತ ಗುರುವಾರ ಬಾಬು ಜಗಜೀವನ್ ರಾಮ್ ಕೃಷಿ ಸಮ್ಮಾನ್ ಪ್ರಶಸ್ತಿಯನ್ನು ಸಮಗ್ರ ಕೃಷಿ ಪದ್ಧತಿಯ ಅಳವಡಿಕೆಗೆ ಪಡೆದಿರುತ್ತಾರೆ.
ಈ ಪ್ರಶಸ್ತಿಯನ್ನು ಪಡೆದ ಕರ್ನಾಟಕ ರಾಜ್ಯದ ಏಕೈಕ ರೈತರಾಗಿರುತ್ತಾರೆ. ಈ ಪ್ರಶಸ್ತಿಯ ಮೊತ್ತ ರೂ.25 ಸಾವಿರ ಮತ್ತು ಪಾರಿತೋಷಕವನ್ನು ಒಳಗೊಂಡಿದೆ ಎಂದು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ವಿರೇಂದ್ರ ಕುಮಾರ್ ಅವರು ತಿಳಿಸಿದ್ದಾರೆ.