ತಮಿಳುನಾಡಿನಲ್ಲಿ ಸೋಂಕು ತೀವ್ರ
17/07/2020

ಚೆನ್ನೈ ಜು.17 : ತಮಿಳುನಾಡಿನಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 4,549 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.
ಹೌದು.. ತಮಿಳುನಾಡಿನಲ್ಲಿ ಇಂದು 4,549 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಆ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1,56,369ಕ್ಕೆ ಏರಿಕೆಯಾಗಿದೆ. ಈ ಪೈಕಿ 1,07,416 ಮಂದಿ ಸೋಂಕಿತರು ಗುಣಮುಖಾಗಿದ್ದು, 46,714 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಂತೆಯೇ ಇಂದು ತಮಿಳುನಾಡಿನಲ್ಲಿ 69 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಆ ರಾಜ್ಯದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 2,236 ಕ್ಕೆ ಏರಿಕೆಯಾಗಿದೆ ಎಂದು ತಮಿಳುನಾಡು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
