ವಿವಾದ ಸೃಷ್ಟಿಸಿದ ಶ್ರೀರಾಮುಲು ಮಾತು

17/07/2020

ಬೆಂಗಳೂರು ಜು.17 : ದಿನದಿಂದ ದಿನಕ್ಕೆ ಆತಂಕಕಾರಿಯಾಗಿ ಹೆಚ್ಚಾಗುತ್ತಿರುವ ರಾಜ್ಯವನ್ನು ಕೋವಿಡ್-19 ಸಾಂಕ್ರಾಮಿಕ ರೋಗದಿಂದ ದೇವರೇ ಕಾಪಾಡಬೇಕು ಎಂಬ ಆರೋಗ್ಯ ಸಚಿವ ಶ್ರೀರಾಮುಲು ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ.
ಆರೋಗ್ಯ ಸಚಿವರ ಹೇಳಿಕೆ ವಿರೋಧಿಸಿ ರಾಜ್ಯಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್,
ರಾಜ್ಯವನ್ನು ದೇವರೇ ಕಾಪಾಡಬೇಕು ಎಂದು ಆರೋಗ್ಯ ಸಚಿವರು ಹೇಳುತ್ತಿರುವುದು ಕೋವಿಡ್ ಬಿಕ್ಕಟ್ಟು ನಿರ್ವಹಣೆಯಲ್ಲಿ ಬಿಜೆಪಿ
ಸರ್ಕಾರದ ವೈಫಲ್ಯವನ್ನು ತೋರಿಸುತ್ತಿದೆ. ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಆಗದಿದ್ದರೆ ಇಂತಹ ಸರ್ಕಾರ ನಮ್ಮಗೆ ಏಕೆ ಬೇಕು ಎಂದು ಪ್ರಶ್ನಿಸಿದ್ದಾರೆ.ಈ ಸರ್ಕಾರದ ಅಸಮರ್ಥತೆಯು ನಾಗರಿಕರನ್ನು ದೇವರ ಕರುಣೆಗೆ ಬಿಟ್ಟಿದೆ ಎಂದು ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.