ಆಪ್ತ ಸಮಾಲೋಚನೆಗೆ ಟೆಲಿ-ಕೌನ್ಸೆಲಿಂಗ್ ಸೌಲಭ್ಯ

17/07/2020

ಮಡಿಕೇರಿ ಜು.17 : ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿಯಲ್ಲಿ ನಿರ್ಲಕ್ಷತೆಗೊಳಗಾದ, ಪರಿತ್ಯಜಿಸಲ್ಪಟ್ಟ, ದೌರ್ಜನ್ಯಕ್ಕೆ ಹಾಗೂ ಶೋಷಣೆಗೆ ಒಳಗಾದ ಮತ್ತು ಕುಟುಂಬದಿಂದ ಬೇರ್ಪಟ್ಟ ಮಕ್ಕಳು ದುರ್ಬಲ ಸ್ಥಿತಿಗೆ ತಲುಪದಿರುವಂತೆ ತಡೆಯಲು ಹಾಗೂ ಇಂತಹ ಪ್ರಕರಣಗಳನ್ನು ಕಡಿಮೆ ಮಾಡಲು ಮತ್ತು ಸಂಕಷ್ಟದಲ್ಲಿರುವ ಮಕ್ಕಳ ಪರಿಸ್ಥಿತಿಯನ್ನು ಉತ್ತಮಪಡಿಸುವ ಉದ್ದೇಶದಿಂದ ಕರ್ನಾಟಕದಲ್ಲಿ ಆಪ್ತ-ಸಮಾಲೋಚನೆ ಅಗತ್ಯವಿರುವ ಎಲ್ಲಾ ಮಕ್ಕಳಿಗಾಗಿ “ಟೆಲಿ-ಕೌನ್ಸೆಲಿಂಗ್” ಸೌಲಭ್ಯ ಪ್ರಾರಂಭಿಸಲಾಗಿದೆ. ಆಪ್ತ ಸಮಾಲೋಚನೆ ಬಯಸುವ ಕೊಡಗು ಜಿಲ್ಲೆಯಲ್ಲಿನ ಎಲ್ಲಾ ಮಕ್ಕಳು ಹಾಗೂ ಮಕ್ಕಳ ಪೋಷಕರು ಸಹ 18004252244 ಸಂಖ್ಯೆಗೆ ಕರೆ ಮಾಡುವ ಮೂಲಕ ಉಚಿತವಾಗಿ ಆಪ್ತ ಸಮಾಲೋಚನೆ ಸೌಲಭ್ಯ ಪಡೆಯಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರವೀಂದ್ರ ಅವರು ತಿಳಿಸಿದ್ದಾರೆ.