ಮಡಿಕೇರಿ ಕ್ರೆಸೆಂಟ್ ಶಾಲೆಗೆ ಶೇ.100 ಫಲಿತಾಂಶ

19/07/2020

ಮಡಿಕೇರಿ ಜು.19 : ಲಾಕ್ ಡೌನ್ ಸಂದರ್ಭ ಜನರ ಸಂಕಷ್ಟಕ್ಕೆ ಸ್ಪಂದಿಸಿ ವಿದ್ಯಾರ್ಥಿಗಳಿಗೆ ಶುಲ್ಕ ರಹಿತ ಪ್ರವೇಶವನ್ನು ಒದಗಿಸಿ ಮಾನವೀಯತೆ ಮೆರೆದಿದ್ದ ಮಡಿಕೇರಿ ನಗರದ ಕ್ರೆಸೆಂಟ್ ಶಾಲೆ ಇದೀಗ ಕೇಂದ್ರೀಯ ಪಠ್ಯಕ್ರಮ (ಸಿಬಿಎಸ್‍ಇ)10ನೇ ತರಗತಿಯಲ್ಲಿ ಶೇ.100 ರಷ್ಟು ಸಾಧನೆ ಮಾಡಿದೆ.
ಪರೀಕ್ಷೆಗೆ ಹಾಜರಾದ 25 ವಿದ್ಯಾರ್ಥಿಗಳಲ್ಲಿ ನಾಲ್ವರು ಉನ್ನತ ಶ್ರೇಣಿಯಲ್ಲಿ, 7 ಮಂದಿ ಪ್ರಥಮ ಶ್ರೇಣಿಯಲ್ಲಿ ಹಾಗೂ 14 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಿದ್ಯಾರ್ಥಿಗಳ ಪರಿಶ್ರಮದ ಬಗ್ಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ತೃಪ್ತಿ ವ್ಯಕ್ತಪಡಿಸಿದೆ.