ಕೊಡಗಿನಲ್ಲಿ 120 ವೈದ್ಯರ ಹುದ್ದೆಗಳ ಭರ್ತಿಗೆ ಕ್ರಮ

19/07/2020

ಮಡಿಕೇರಿ ಜು.19 : ಕೊಡಗಿನಲ್ಲಿ ಕೋವಿಡ್-19 ರ ಸಂಬಂಧ ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳು ಕಾರ್ಯನಿರ್ವಹಿಸುತ್ತಿವೆ. ಜಿಲ್ಲೆಯಲ್ಲಿ 120 ವೈದ್ಯರ ಹುದ್ದೆಗಳು ಖಾಲಿ ಇದ್ದು, ಸದರಿ ಖಾಲಿ ಹುದ್ದೆಗಳಿಗೆ ಎದುರಾಗಿ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ವೈದ್ಯಕೀಯ ಶಿಕ್ಷಣ ಇಲಾಖೆಯ ಅಧೀನದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಕೋವಿಡ್ ಆಸ್ಪತ್ರೆ ಮತ್ತು ಕೋವಿಡೇತರ ಸೇವೆಗಳನ್ನು ನಿರ್ವಹಿಸುತ್ತಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಕೀಯ ಸೇವೆಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದೆ.
ಈ ಎರಡೂ ಇಲಾಖೆಗಳಲ್ಲಿ ಸರ್ಕಾರದಿಂದ ಮಂಜೂರಾದ ವೈದ್ಯರ ಹುದ್ದೆಗಳು ಖಾಲಿ ಇದ್ದು, ಆಸಕ್ತರು ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೊಡಗು ವೈದ್ಯಕೀಯ ಕಾಲೇಜಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಡಾ:ಕಾರ್ಯಪ್ಪ, ಡೀನ್ ಮತ್ತು ನಿರ್ದೇಶಕರು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ (ಮೊ:9845431984) ಇವರನ್ನು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶ್ರೀ ರಾಜೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಡಿಕೇರಿ (ಮೊ:9448422302) ಇವರನ್ನು ಸಂಪರ್ಕಿಸಲು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.