ಕುಶಾಲನಗರ ಸಂಪೂರ್ಣ ಬಂದ್

19/07/2020

ಮಡಿಕೇರಿ ಜು.19 : ಎರಡು ದಿನಗಳ ಲಾಕ್‍ಡೌನ್ ಹಿನ್ನೆಲೆಯಲ್ಲಿ ಕುಶಾಲನಗರ ಪಟ್ಟಣದಲ್ಲಿ ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತಗೊಂಡಿತ್ತು. ಅಗತ್ಯ ಸೇವೆಗಳಿಗೆ ಹೊರತುಪಡಿಸಿ ಉಳಿದ ಎಲ್ಲಾ ರೀತಿಯ ವಾಹನ ಸಂಚಾರಕ್ಕೆ ಪೊಲೀಸರು ನಿರ್ಬಂಧ ವಿಧಿಸಿದ್ದರು.
ಕುಶಾಲನಗರ ಪಟ್ಟಣ ಸಂಪೂರ್ಣ ಬಂದ್ ಆಗುವುದರೊಂದಿಗೆ ಜನಜೀವನ ಸಂಪೂರ್ಣ ಸ್ತಬ್ಧವಾಗಿತ್ತು. ಅನಾವಶ್ಯಕ ಓಡಾಟ ನಡೆಸುತ್ತಿದ್ದ ವಾಹನ ಸವಾರರ ಮೇಲೆ ಪೊಲೀಸರು ಗಡಿಭಾಗದ ಗೇಟ್ ಬಳಿ ವಾಪಾಸ್ ಕಳುಹಿಸುತ್ತಿದ್ದ ದೃಶ್ಯ ಗೋಚರಿಸಿತು.