3 ಪೊಲೀಸ್ ಠಾಣೆಗಳು ಸೀಲ್ ಡೌನ್

20/07/2020

ಚಿಕ್ಕಮಗಳೂರು ಜು.20 : ನಾಲ್ವರು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಮೂರು ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ.
ಚಿಕ್ಕಮಗಳೂರು ಗ್ರಾಮಾಂತರ, ಅಜ್ಜಂಪುರ ಹಾಗೂ ಯಗಟಿ ಪೊಲೀಸ್ ಠಾಣೆಗಳನ್ನು ಸೀಲ್‍ಡೌನ್ ಮಾಡಿ ಸೋಂಕಿತ ಪೊಲೀಸ್ ಪೇದೆಗಳನ್ನು ಚಿಕ್ಕಮಗಳೂರು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಲ್ಲಿಯವರೆಗೆ 250 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.