ಜಿಲ್ಲೆಯಲ್ಲಿ ಹೊಸದಾಗಿ 7 ಕೋವಿಡ್ ಪ್ರಕರಣಗಳು ಪತ್ತೆ

20/07/2020

ಮಡಿಕೇರಿ ಜು. 20 : ಜಿಲ್ಲೆಯಲ್ಲಿ ಹೊಸದಾಗಿ 7 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 281ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಮಡಿಕೇರಿ ದೇಚೂರಿನ 41 ವರ್ಷದಮಹಿಳೆ ಮತ್ತು 48 ವರ್ಷದ ಪುರುಷನಿಗೆ ಹಾಗೂ ಕಾರುಕುಂದ ಗ್ರಾಮದ 24 ವರ್ಷದ ಯುವಕನಿಗೆ ಸೋಂಕು ಪತ್ತೆಯಾಗಿದ್ದು, ವಿರಾಜಪೇಟೆ ತಾಲ್ಲೂಕಿನ ತೊತೇರಿ ಗ್ರಾದ 70 ವರ್ಷದ 36 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ.
ವಿರಾಜಪೇಟೆ ತಾಲ್ಲೂಕಿನ ಜೋಡುಪಟ್ಟಿ ಗ್ರಾಮದ 38 ವರ್ಷದ ಮಹಿಳೆ ಹಾಗೂ ಕಕ್ಲೂರಿನ 51 ವರ್ಷದ ಮಹಿಳೆಯಲ್ಲೂ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 281 ಆಗಿದೆ. 183 ಮಂದಿ ಸಂಪೂರ್ಣವಾಗಿ ಗುಣಮುಖಗೊಂಡು ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. 5 ಮರಣ ಪ್ರಕರಣಗಳು ವರದಿಯಾಗಿದ್ದು, ಒಟ್ಟು 93 ಸಕ್ರಿಯ ಪ್ರಕರಣಗಳಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿರುವ ಒಟ್ಟು ಕಂಟೈನ್‍ಮೆಂಟ್ ಪ್ರದೇಶಗಳ ಸಂಖ್ಯೆ 114 ಆಗಿದೆ ಎಂದು ಜಿಲ್ಲಾಧಿಕಾರಿ ಅನಿಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.