ಅಂತಿಮ ವರ್ಷದ ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳಿಗೆ ಕೋವಿಡ್ ನಿರ್ವಹಣಾ ತರಬೇತಿ

20/07/2020

ಮಡಿಕೇರಿ ಜು.20 : ಪ್ರಸಕ್ತ ಬೋಧಕ ಆಸ್ಪತ್ರೆಯು ಮುಚ್ಚಿರುವುದರಿಂದ ವೈದ್ಯಕೀಯ ಶಿಕ್ಷಣ ವಿದ್ಯಾರ್ಥಿಗಳು ಮನೆಯಲ್ಲಿದ್ದಾರೆ. ಆದರೂ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು 30 ಮಂದಿ ಅಂತಿಮ ವರ್ಷದ ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಅವರಿಗೆ ಕೋವಿಡ್ ಸಂಬಂಧದ ತರಬೇತಿ ನೀಡಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ಈ ರೀತಿ ತರಬೇತಿ ಪಡೆದ ಎಲ್ಲಾ ವಿದ್ಯಾರ್ಥಿಗಳು ಕೋವಿಡ್ ಕೇರ್ ಸೆಂಟರ್ ಮತ್ತು ಮನೆಯಲ್ಲಿರುವ ಕೋವಿಡ್ ಸೋಂಕಿತರೊಂದಿಗೆ ಮಾತನಾಡಿ ಅವರ ಯೋಗಕ್ಷೇಮ ವಿಚಾರಿಸಲು ಸಂತೋಷದಿಂದ ಒಪಿದ್ದಾರೆ ಎಂದೂ ಅವರು ಹೇಳಿದ್ದಾರೆ.