ಚೆನ್ನಯ್ಯನಕೋಟೆ ಬಡ ಕುಟುಂಬಗಳಿಗೆ ದಲಿತ ಸಂಘರ್ಷ ಸಮಿತಿಯಿಂದ ಕಿಟ್ ವಿತರಣೆ

21/07/2020

ಮಡಿಕೇರಿ ಜು.21 : ಕೊರೋನಾ ಸೀಲ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಚೆನ್ನಯ್ಯನಕೋಟೆ ಬಡ ಕುಟುಂಬಗಳಿಗೆ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ದಿನಸಿ ಕಿಟ್ ಗಳನ್ನು ವಿತರಿಸಲಾಯಿತು.
ಸಮಿತಿಯ ವಿಭಾಗೀಯ ಎನ್.ವೀರಭದ್ರಯ್ಯ, ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್, ತಾಲ್ಲೂಕು ಸಂಘಟನಾ ಸಂಚಾಲಕ ಎ.ಪಿ.ದೀಪಕ್ ಮತ್ತಿತರರು ಹಾಜರಿದ್ದರು. ಬಡವರಿಗೆ ಕಿಟ್ ವಿತರಿಸುವ ಕಾರ್ಯಕ್ರಮವನ್ನು ಜಿಲ್ಲೆಯ ವಿವಿಧೆಡೆ ಹಮ್ಮಿಕೊಳ್ಳಲಾಗುವುದು ಎಂದು ದಿವಾಕರ್ ತಿಳಿಸಿದರು.