ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 282ಕ್ಕೆ ಏರಿಕೆ

21/07/2020

ಮಡಿಕೇರಿ ಜು. 21 : ಕೊಡಗು ಜಿಲ್ಲೆಯಲ್ಲಿ ಹೊಸದಾಗಿ 1 ಸೋಂಕು ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 282ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ವಿರಾಜಪೇಟೆ ತಾಲ್ಲೂಕಿನ ತೋತೆರಿ ಗ್ರಾಮದ 63 ವರ್ಷದ ಮಹಿಳೆಗೆ ಸೊಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 282ಕ್ಕೆ ಏರಿಕೆಯಾಗಿದ್ದು, ಈ ಪೈಕಿ 201 ಮಂದಿ ಗುಣಮುಖರಾಗಿದ್ದರೆ, 5 ಮಂದಿ ಸಾವಿಗೀಡಾಗಿದ್ದಾರೆ. ಪ್ರಸಕ್ತ 76 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು ನಿಯಂತ್ರಿತ ಪ್ರದೇಶಗಳು 108ಕ್ಕೆ ಏರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.