ಕೊರೊನಾ ಗೆದ್ದ ಜನಾರ್ಧನ ಪೂಜಾರಿ

21/07/2020

ಮಂಗಳೂರು ಜು.21 : ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರು ಕೊರೊನಾ ಎಂಬ ಮಹಾಮಾರಿ ವೈರಸನ್ನು ಗೆದ್ದು ಬಂದಿದ್ದು, ಉತ್ತಮ ಪೌಷ್ಠಿಕ ಆಹಾರ, ಕಷಾಯ ಸೇವನೆ ಮಾಡಿ ಎಂದು ಸಲಹೆ ನೀಡಿದ್ದಾರೆ.
ಹೌದು. 83ರ ಹರೆಯದ ಜನಾರ್ಧನ ಪೂಜಾರಿ ಅವರಿಗೆ ಜುಲೈ 4ರಂದು ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಕೇವಲ ಪೂಜಾರಿ ಮಾತ್ರವಲ್ಲದೆ ಅವರ ಕುಟುಂಬಕ್ಕೂ ಕೊರೊನಾ ಅಂಟಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಎಲ್ಲರೂ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡಗಡೆಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಜನಾರ್ದನ ಪೂಜಾರಿ ನಿವಾಸವಿದ್ದು, ಮನೆಯ ಕೆಲಸದಾಕೆಯಿಂದ ಪೂಜಾರಿ ಕುಟುಂಬಕ್ಕೆ ಕೊರೊನಾ ಸೋಂಕು ಹರಡಿತ್ತು.
ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಜನಾರ್ದನ ಪೂಜಾರಿ, ನನ್ನ ಆರೋಗ್ಯಕ್ಕಾಗಿ ಹಾರೈಸಿದ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ದೈವ-ದೇವರ ಅನುಗ್ರಹ ಹಾಗೂ ನಿಮ್ಮೆಲ್ಲರ ಹಾರೈಕೆಯಿಂದ ನಾವೆಲ್ಲರೂ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿರುತ್ತೇವೆ. ನಮ್ಮ ಕ್ಷೇಮಕ್ಕಾಗಿ ಪ್ರಾರ್ಥಿಸಿದ ಎಲ್ಲ ಬಂಧುಗಳು, ಹಿತೈಷಿಗಳು ಹಾಗೂ ಉತ್ತಮ ಚಿಕಿತ್ಸೆ ನಿಡಿದ ವೈದ್ಯರು, ದಾದಿಯರು, ಸಿಬ್ಬಂದಿ ವರ್ಗ ಹಾಗೂ ಸಂಸ್ಥೆಗೆ ಕೃತಜ್ಞತೆ ಎಂದು ಹೇಳಿದ್ದಾರೆ.