ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.80 ರಷ್ಟು ಫಲಿತಾಂಶ

21/07/2020

ಮಡಿಕೇರಿ ಜು.21 : ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2019-20 ನೇ ಸಾಲಿನ ದ್ವಿತೀಯ ಪಿಯುಸಿ. ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕಾಲೇಜಿಗೆ ಶೇ.80 ಫಲಿತಾಂಶ ಬಂದಿದೆ.
ಅದರಲ್ಲಿ 20 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 107 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 56 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅದರಲ್ಲಿ ವಾಣಿಜ್ಯ ವಿಭಾಗದಲ್ಲಿ ಲೀಲಾವತಿ ಬಸವರಾಜು ಕೊಪ್ಪದ ಅವರು 583 ಅಂಕಗಳನ್ನು ಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ತಾಸೀನಾ ಎಂ.ಎಸ್. 522 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಹಾಗೂ ಕಲಾ ವಿಭಾಗದಲ್ಲಿ ವಿನೋದ್ ಕುಮಾರ್ ಶೆಟ್ಟಿ ಅವರು 513 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ ಅವರು ತಿಳಿಸಿದ್ದಾರೆ.