ಭರದಿಂದ ಸಾಗಿದೆ ಅಬ್ಯಾಲ- ಚೆಟ್ಟಳ್ಳಿ ರಸ್ತೆ ಕಾಮಗಾರಿ

21/07/2020

ಮಡಿಕೇರಿ ಜು.21 : ಚೆಟ್ಟಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಅಬ್ಯಾಲದಿಂದ ಚೆಟ್ಟಳ್ಳಿಯವರೆಗೆ ಸುಮಾರು 6 ಕೋಟಿ ರೂ.ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣ ಕಾಮಗಾರಿ ಭರದಿಂದ ಸಾಗಿದೆ.
ಜಿ.ಪಂ ಮಾಜಿ ಸದಸ್ಯ ಹಾಗೂ ಸೋಮವಾರಪೇಟೆ ತಾ.ಪಂ ಸದಸ್ಯ ಬಲ್ಲಾರಂಡ ಮಣಿಉತ್ತಪ್ಪ ಅವರ ಮನವಿಗೆ ಮಣಿದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ರಸ್ತೆ ಕಾಮಗಾರಿಗೆ ಅನುದಾನ ಮಂಜೂರು ಮಾಡಿಸಿಕೊಟ್ಟಿದ್ದರು.
ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದ ಮಣಿಉತ್ತಪ್ಪ ಅವರು ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಗ್ರಾಮಸ್ಥರ ಹಿತದೃಷ್ಟಿಯಿಂದ ಕತ್ತಲೆಕಾಡು ಗ್ರಾಮದಿಂದ ಅಬ್ಯಾಲದವರೆಗೂ ಕಾಂಕ್ರಿಟ್ ರಸ್ತೆ ನಿರ್ಮಾಣಗೊಳ್ಳುವ ಅಗತ್ಯವಿದೆ. ಆದ್ದರಿಂದ ಶಾಸಕರು ಈ ರಸ್ತೆಯ ಅಭಿವೃದ್ಧಿಗೂ ಸಹಕಾರ ನೀಡಬೇಕೆಂದು ಅವರು ಇದೇ ಸಂದರ್ಭ ಮನವಿ ಮಾಡಿದರು.
ಇಂಜಿನಿಯರ್ ಪೀಟರ್, ಗುತ್ತಿಗೆದಾರ ದಿನೇಶ್, ಪ್ರಮುಖರಾದ ಕೆ.ಕಿಶೋರ್ ಮತ್ತಿತರರು ಹಾಜರಿದ್ದರು.