ಕೊಡಗಿನಲ್ಲಿ ಸೋಂಕಿತರ ಸಂಖ್ಯೆ 289ಕ್ಕೆ ಏರಿಕೆ : 210 ಮಂದಿ ಗುಣಮುಖ

ಮಡಿಕೇರಿ ಜು. 22 : ಕೊಡಗು ಜಿಲ್ಲೆಯಲ್ಲಿ ಹೊಸದಾಗಿ 7 ಸೋಂಕು ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 289ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಬೆಂಗಳೂರಿಂದ ಬಂದಿದ್ದ ಮುತ್ತಾರ್ಮುಡಿಯ 36 ವರ್ಷದ ಪುರುಷ ಹಾಗೂ 35 ವರ್ಷದ ಮಹಿಳೆಗೆ ಸೋಂಕು ಪತ್ತೆಯಾಗಿದ್ದು, ಮಡಿಕೇರಿ ರಾಣಿಪೇಟೆಯ ಹೇಮರಾಜ್ ಕಾಂಪೌಂಡ್ 44 ವರ್ಷದ ಪುರುಷನಿಗೆ ಸೋಂಕು ದೃಡಪಟ್ಟಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ವಿರಾಜಪೇಟೆಯ ವಡ್ಡರಮಾಡಿನಲ್ಲಿ 40 ವರ್ಷದ ಪುರುಷನಿಗೆ, ಬೆಕ್ಕೆಸೊಡಲೂರು ಗ್ರಾಮದ 44 ವರ್ಷದ ಮಹಿಳೆಗೆಯಲ್ಲಿ ಸೋಂಕು ಪತ್ತೆಯಾಗಿದೆ.
ಮಡಿಕೇರಿಯ ದಾಸವಾಳ ರಸ್ತೆಯ 37 ವರ್ಷದ ಪುರುಷನಿಗೆ
ಹಾಗೂ ಸೋಮವಾರಪೇಟೆಯ ಶನಿವಾರಸಂತೆಯ 32 ವರ್ಷದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಮಾಹಿತಿ ನೀಡಿದರು.
ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 289ಕ್ಕೆ ಏರಿಕೆಯಾಗಿದ್ದು, ಈ ಪೈಕಿ 210 ಮಂದಿ ಗುಣಮುಖರಾಗಿದ್ದರೆ, 5 ಮಂದಿ ಸಾವಿಗೀಡಾಗಿದ್ದಾರೆ. ಪ್ರಸಕ್ತ 74 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು ನಿಯಂತ್ರಿತ ಪ್ರದೇಶಗಳು 112ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
