ಅಂಗನವಾಡಿ ಕಾರ್ಯಕರ್ತೆ ಸಾವು

22/07/2020

ಕಲಬುರಗಿ ಜು.22 : ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯೋರ್ವರು ಹೈದ್ರಾಬಾದ್ ಗೆಕರೆದ್ಯೊಯ್ಯುವ ಮಾರ್ಗದಲ್ಲಿ ಮಂಗಳವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದ ಅಕ್ಕನಾಗಮ್ಮ ದಯಾಮಣಿ(50) ಮೃತ ದುರ್ದೈವಿ. ಸೋಮವಾರ ರಾತ್ರಿ 2 ಗಂಟೆ ಸುಮಾರಿಗೆ ಅಕ್ಕನಾಗಮ್ಮ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ತಕ್ಷಣವೇ ಕುಟುಂಬಸ್ಥರು ಅವರನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ಕರೆತಂದರಾದರೂ ಅವರನ್ನು ದಾಖಲಿಸಿಕೊಳ್ಳಲಿಲ್ಲ. ನಂತರ ಇಎಸ್‍ಐಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ವೆಂಟಿಲೇಟರ್ ಇಲ್ಲ ಎಂಬ ನೆಪ ಒಡ್ಡಿ ವೈದ್ಯರು ಚಿಕಿತ್ಸೆಗೆ ನಿರಾಕರಿಸಿದರು ಎಂಬ ಆರೋಪ ಕೇಳಿಬಂದಿದೆ.