ಮರದಿಂದ ಬಿದ್ದು ಕಾರ್ಮಿಕ ಸಾವು : ಸೋಮವಾರಪೇಟೆ ತಾಲ್ಲೂಕಿನ ಅಬ್ಬೂರುಕಟ್ಟೆಯಲ್ಲಿ ಘಟನೆ

22/07/2020

ಮಡಿಕೇರಿ ಜು. 22 : ಮರ ಕಪಾತು ಮಾಡುತ್ತಿದ್ದ ಸಂದರ್ಭ ಆಯತಪ್ಪಿ ಬಿದ್ದು, ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಅಬ್ಬೂರುಕಟ್ಟೆಯಲ್ಲಿ ನಡೆದಿದೆ.

ತಣ್ಣೀರು ಹಳ್ಳ ಗ್ರಾಮದ ನಿವಾಸಿ ಗಣೇಶ್(48) ಮೃತರು.  ಅಬ್ಬೂರುಕಟ್ಟೆಯಲ್ಲಿ ಶಾಂತಕುಮಾರ್ ಎಂಬವರ ಕಾಫಿ ತೋಟದಲ್ಲಿ ಮರಕಪಾತು ಮಾಡುತ್ತಿದ್ದ ಸಂದರ್ಭ ಘಟನೆ ನಡೆದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.