ವಿರಾಜಪೇಟೆಯ ಕೋವಿಡ್ ಸೋಂಕಿತರ ಆರೈಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ : ಪರಿಶೀಲನೆ
23/07/2020

ಮಡಿಕೇರಿ ಜು. 23 : ವಿರಾಜಪೇಟೆ ತಾಲ್ಲೂಕಿನಲ್ಲಿ ಕೋವಿಡ್ -19 ಸೋಂಕಿತರ ಆರೈಕೆಗಾಗಿ ಗುರುತಿಸಲಾದ 2 ಕೋವಿಡ್ ಆರೈಕೆ ಕೇಂದ್ರಗಳನ್ನು ವಿರಾಜಪೇಟೆ ತಾಲ್ಲೂಕು ತಹಶೀಲ್ದಾರ್, ಜಿಲ್ಲಾ ಸಾಂಕ್ರಾಮಿಕ ರೋಗಶಾಸ್ತ್ರಜ್ಞರು, ಹೋಬಳಿ ನೋಡಲ್ ಅಧಿಕಾರಿ ಮತ್ತು ಜಿಲ್ಲಾ ಐಟಿಡಿಪಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಆಹಾರ ಮತ್ತು ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು.
ಗುರುತಿಸಲಾದ 2 ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಒಟ್ಟು 240 ಹಾಸಿಗೆಗಳಿದ್ದು, ಇವುಗಳಲ್ಲಿ ಲಕ್ಷಣರಹಿತ ಅಥವಾ ಅಲ್ಪ ಲಕ್ಷಣಗಳನ್ನು ಹೊಂದಿರುವ ಕೋವಿಡ್-19 ಸೋಂಕಿತರಿಗೆ ಆರೈಕೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.



