ಇಲ್ಲಿಯವರೆಗೆ ಕೊಡಗಿನಲ್ಲಿ 13304 ಮಂದಿಯ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ

23/07/2020

ಮಡಿಕೇರಿ ಜು.23 : ಕೊಡಗು ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13304 ಮಂದಿಯ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಇವುಗಳಲ್ಲಿ ಪಾಸಿಟಿವ್ ಪ್ರಕರಣಗಳು 311, ನೆಗೆಟಿವ್ ವರದಿ ಬಂದ ಪ್ರಕರಣಗಳು 12782 ಆಗಿದೆ. 211 ಪ್ರಕರಣಗಳಲ್ಲಿ ವರದಿಯನ್ನು ನಿರೀಕ್ಷಿಸಲಾಗುತ್ತಿದೆ, ಈಗಾಗಲೇ ಐವರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.