ಕೊಡಗಿನ 4 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ

23/07/2020

ಮಡಿಕೇರಿ ಜು.23 : ಜಿಲ್ಲೆಯಲ್ಲಿ ಈ ಬಾರಿ 1,200 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯಲ್ಲಿ 4 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶಿವಲಿಂಗ ಶೆಟ್ಟಿ ತಿಳಿಸಿದ್ದಾರೆ.
ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 504 ವಿದ್ಯಾರ್ಥಿಗಳು, ಸಂತ ಜೋಸೆಫರ ಕಾಲೇಜು 312, ವಿರಾಜಪೇಟೆ ಪದವಿ ಪೂರ್ವ ಕಾಲೇಜಿನಲ್ಲಿ 216 ಮತ್ತು ಸೋಮವಾರಪೇಟೆ ಪದವಿ ಪೂರ್ವ ಕಾಲೇಜಿನಲ್ಲಿ 168 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.