ಕೊಡಗು ಕೋವಿಡ್ ಆಸ್ಪತ್ರೆಯಲ್ಲಿ 40 ಮಂದಿಗೆ ಚಿಕಿತ್ಸೆ

23/07/2020

ಮಡಿಕೇರಿ ಜು.23 : ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕೋವಿಡ್ ಆಸ್ಪತ್ರೆಯಲ್ಲಿ 40 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಕೇರ್ ಸೆಂಟರ್ ನಲ್ಲಿ 19 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಹೋಂ ಐಸೋಲೇಶನ್ ನಲ್ಲಿ 14 ಮಂದಿಯ ಮೇಲೆ ನಿಗಾ ವಹಿಸಲಾಗಿದೆ.
ಗುರುವಾರ ಒಟ್ಟು 16 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಹೊಸದಾಗಿ ಈ ದಿನ 6 ನಿಯಂತ್ರಿತ ಪ್ರದೇಶಗಳನ್ನು ತೆರೆಯಲಾಗಿದೆ.