ಕೊಡಗಿನ ಕಂಟೈನ್‍ಮೆಂಟ್ ವಲಯದಿಂದ ಸಿಇಟಿ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳ ಪಟ್ಟಿ ಸಿದ್ಧಪಡಿಸಲು ಸೂಚನೆ

July 23, 2020

ಮಡಿಕೇರಿ ಜು.23 : ಕೋವಿಡ್-19 ಹಿನ್ನೆಲೆ ಕಂಟೈನ್‍ಮೆಂಟ್ ವಲಯದಿಂದ ಪರೀಕ್ಷೆಗೆ ಬರುವ ಸಿಇಟಿ ವಿದ್ಯಾರ್ಥಿಗಳ ಪಟ್ಟಿ ಸಿದ್ಧಪಡಿಸಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಆ ವಿದ್ಯಾರ್ಥಿಗಳನ್ನು ಪರೀಕ್ಷೆ ಸಂದರ್ಭ ಅವರಿರುವ ಸ್ಥಳದಿಂದ ಪರೀಕ್ಷಾ ಸ್ಥಳಕ್ಕೆ ಬಂದು ಪರೀಕ್ಷೆ ಬರೆಯುವಂತೆ ಹಾಗೂ ಮತ್ತೆ ಅವರನ್ನು ಮನೆಗೆ ಕಳುಹಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಬೇಕು. ಯಾವುದೇ ಒಬ್ಬ ವಿದ್ಯಾರ್ಥಿಯೂ ಸಿಇಟಿ ಪರೀಕ್ಷೆಯಿಂದ ವಂಚಿತರಾಗದಂತೆ ಗಮನಹರಿಸಬೇಕು ಎಂದರು.

error: Content is protected !!