ಮೃತಪಟ್ಟವರ ಸಂಖ್ಯೆ 1616ಕ್ಕೆ ಏರಿಕೆ

24/07/2020

ಬೆಂಗಳೂರು ಜು.24 : ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಗುರುವಾರ ಒಂದೇ ದಿನ ಬರೋಬ್ಬರಿ 97 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1616ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 47 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 97 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2207 ಹೊಸ ಪ್ರಕರಣಗಳು ವರದಿಯಾಗಿದ್ದು,
ರಾಜ್ಯದಲ್ಲಿ ಒಟ್ಟು 5030 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 80,863ಕ್ಕೆ ಏರಿಕೆಯಾಗಿದೆ ಎಂದು ಸಚಿವ ಸುಧಾಕರ್ ಅವರು ಮಾಹಿತಿ ನೀಡಿದ್ದಾರೆ.