ಭ್ರಷ್ಟಾಚಾರ ಮಾಡಿದವರನ್ನು ನೇಣಿಗೆ ಹಾಕಿ : ಶಾಸಕ ಅಪ್ಪಚ್ಚುರಂಜನ್ ಒತ್ತಾಯ

24/07/2020

ಮಡಿಕೇರಿ ಜು.24 : ಕೊರೋನಾ ನಿರ್ವಹಣೆಯಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸರ್ಕಾರದ ವಿರುದ್ಧ ಆರೋಪ ಕೇಳಿ ಬಂದಿರುವುದರಿಂದ ತನಿಖೆ ನಡೆಸುವುದು ಸೂಕ್ತವೆಂದು ಅಭಿಪ್ರಾಯಪಟ್ಟಿರುವ ಮಡಿಕೇರಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು, ಒಂದು ವೇಳೆ ಇಂತಹ ಪರಿಸ್ಥಿತಿಯಲ್ಲೂ ಭ್ರಷ್ಟಾಚಾರ ನಡೆದಿದ್ದರೆ ತಪ್ಪಿತಸ್ಥರನ್ನು ನೇಣಿಗೆ ಹಾಕಬೇಕೆಂದು ಒತ್ತಾಯಿಸಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ 600 ಕೋಟಿ ರೂ. ಗಳಷ್ಟು ಖರ್ಚು ಮಾಡಿರುವುದಾಗಿ ಹೇಳುತ್ತಿದೆ. ಆದರೆ ಸಿದ್ದರಾಮಯ್ಯ ಅವರು ನಾಲ್ಕು ಸಾವಿರ ಕೋಟಿ ಖರ್ಚು ಮಾಡುವ ಮೂಲಕ ಭ್ರಷ್ಟಾಚಾರ ಎಸಗಲಾಗಿದೆ ಎಂದು ಆರೋಪಿಸಿದ್ದಾರೆ.
ಆರೋಪಗಳು ಕೇಳಿ ಬಂದಾಗ ಪ್ರಕರಣವನ್ನು ತನಿಖೆಗೆ ಒಪ್ಪಿಸುವುದು ಸಹಜ. ಅದೇ ಪ್ರಕಾರವಾಗಿ ಈ ಪ್ರಕರಣವನ್ನು ಕೂಡ ತನಿಖೆಗೆ ಒಪ್ಪಿಸಲಿ. ಆ ಮೂಲಕ ಎಲ್ಲಾ ವ್ಯವಹಾರಗಳು ಪಾರದರ್ಶಕವಾಗಿರಲಿ ಎಂದು ಅಪ್ಪಚ್ಚುರಂಜನ್ ತಿಳಿಸಿದರು.