ಕುಟ್ಟದ ಕೆ.ಬಾಡಗ ಗ್ರಾಮದಲ್ಲಿ ಹುಲಿ ದಾಳಿಗೆ ಹಸು ಬಲಿ

24/07/2020

ಮಡಿಕೇರಿ ಜು. 24 : ದಕ್ಷಿಣ ಕೊಡಗಿನಲ್ಲಿ ಮತ್ತೆ ಹುಲಿ ಆತಂಕ ಎದುರಾಗಿದೆ. ಕುಟ್ಟದ ಕೆ.ಬಾಡಗ ಗ್ರಾಮದ ಅಯ್ಯಪ್ಪ ದೇವಾಲಯದ ಬಳಿ ಹುಲಿ ದಾಳಿಗೆ ಹಸುವೊಂದು ಬಲಿಯಾಗಿದೆ. ಗ್ರಾಮದ ಮುಕ್ಕಾಟಿರ ರಮೇಶ್ ಅವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ.
ಅರಣ್ಯ ಇಲಾಖೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಸಿಬ್ಬಂದಿಗಳು ಭೇಟಿ ನೀಡಿ ಪರಿಹಾರದ ಭರವಸೆ ನೀಡಿದ್ದಾರೆ.