Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
9:25 PM Sunday 17-October 2021

ಮಡಿಕೇರಿಯಲ್ಲಿ ಕಾಂಗ್ರೆಸ್ “ಆರೋಗ್ಯ ಅಭಯ ಹಸ್ತ” ಸಭೆ

24/07/2020

ಮಡಿಕೇರಿ ಜು. 24 : ರಾಜ್ಯದಲ್ಲಿ ಕೊರೋನಾ ವೈರಸ್ ನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿರುವ “ಆರೋಗ್ಯ ಅಭಯ ಹಸ್ತ” ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಪಂಚಾಯ್ತಿ ಮಟ್ಟದಲ್ಲಿ ನಡೆಸಲು ಕೆಪಿಸಿಸಿ ನೀಡಿರುವ ಆದೇಶದಂತೆ ಕೊಡಗು ಜಿಲ್ಲೆಯಲ್ಲೂ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿ ನಿಯೋಜಿತ ಆರು ಬ್ಲಾಕ್ ನ ವೀಕ್ಷಕರುಗಳು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರುಗಳು ಹಾಗೂ ಸಾಮಾಜಿಕ ಜಾಲತಾಣದ ಪ್ರಮುಖರ ಪೂರ್ವಭಾವಿ ಸಭೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆ.ಕೆ.ಮಂಜುನಾಥ್ ಕುಮಾರ್, ಆರೋಗ್ಯ ಅಭಯ ಹಸ್ತ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲರೂ ಶ್ರಮವಹಿಸುವಂತೆ ಕರೆ ನೀಡಿದರು. ಕಾರ್ಯಕರ್ತರು ಜನಪರ ಕಾಳಜಿಯೊಂದಿಗೆ ಕಾರ್ಯ ನಿರ್ವಹಿಸುವ ಮೂಲಕ ಕೆಪಿಸಿಸಿ ಅಧ್ಯಕ್ಷರ ಕೈ ಬಲಪಡಿಸಬೇಕೆಂದರು.
ಆರು ಬ್ಲಾಕ್ ಕಾಂಗ್ರೆಸ್ ನ ವ್ಯಾಪ್ತಿಗೆ ಒಳಪಡುವ ಎಲ್ಲಾ ಪಂಚಾಯ್ತಿ ಮಟ್ಟದಲ್ಲಿ ಮತ್ತು ನಗರ, ಪಟ್ಟಣ ಪಂಚಾಯ್ತಿಗೆ ಒಳಪಡುವ ಎಲ್ಲಾ ಬೂತ್ ಮಟ್ಟದಲ್ಲಿ ಇಬ್ಬರು ಡಿಜಿಟಲ್ ಪ್ರತಿನಿಧಿಗಳನ್ನು ನೇಮಕಗೊಳಿಸಲು ಸಭೆ ನಿರ್ಧರಿಸಿತು.
ವೀಕ್ಷಕರುಗಳಾದ ವೆಂಕಪ್ಪಗೌಡ, ಪ್ರದೀಪ್ ರೈ ಪಂಬಾರ್, ಹೇಮನಾಥ್ ಶೆಟ್ಟಿ, ಪಿ. ರಾಜು, ಎಡ್ವಿನ್ ರಿಚರ್ಡ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಪಟ್ಟಡ ರಂಜಿಪೂಣಚ್ಚ, ಮಿದೇರಿರ ನವೀನ್, ಇಸ್ಮಾಯಿಲ್, ಬಿ.ಎಸ್. ಅನಂತಕುಮಾರ್, ಬಿ.ಬಿ.ಸತೀಶ್, ಅಪ್ರು ರವೀಂದ್ರ, ಸಾಮಾಜಿಕ ಜಾಲತಾಣದ ಅಧ್ಯಕ್ಷ ಹೊಸೂರು ಸೂರಜ್, ಸೋಮವಾರಪೇಟೆ ಬ್ಲಾಕ್ ನ ಮಂಜುನಾಥ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಸಾಮಾಜಿಕ ಜಾಲತಾಣದ ಸಂಚಾಲಕ ಆರ್.ಪಿ.ಚಂದ್ರಶೇಖರ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ತೆನ್ನಿರಾ ಮೈನ, ಡಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್ ಸಭೆಯಲ್ಲಿ ಹಾಜರಿದ್ದರು.