ಕೊಡಗಿನಲ್ಲಿ 13627 ಗಂಟಲು ದ್ರವ ಮಾದರಿಗಳ ಪರೀಕ್ಷೆಗೆ ಒಳಪಡಿಸಲಾಗಿದೆ

25/07/2020

ಮಡಿಕೇರಿ ಜು. 25 : ಕೊಡಗು ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13627 ಮಂದಿಯ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ರ ಸಂಬಂಧ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಇತರೆ ದೇಶ/ರಾಜ್ಯಗಳಿಂದ ಪಾಸ್ ಗಳನ್ನು ಪಡೆದು ಜಿಲ್ಲೆಗೆ ಪ್ರವೇಶಿಸಿರುವ ಜನರನ್ನು ಕಡ್ಡಾಯವಾಗಿ ನಿಯಮಾನುಸಾರ ಸಂಪರ್ಕ ತಡೆಯಲ್ಲಿಡಲಾಗುತ್ತಿದೆ.

ಇತರೆ ದೇಶ/ರಾಜ್ಯ/ಜಿಲ್ಲೆಗಳಿಂದ ಕಳೆದ 14 ದಿನಗಳಲ್ಲಿ ಜಿಲ್ಲೆಗೆ ಪ್ರವೇಶಿಸಿರುವ ಜನರ ಪೈಕಿ ಸಂಪರ್ಕ ತಡೆಯಲ್ಲಿರುವ ಜನರ ವಿವರ ಕೆಳಕಂಡಂತಿದೆ.

ಇತರೆ ದೇಶದ ಜನರು- 08, ಇತರೆ ರಾಜ್ಯದ ಜನರು-608 , ಪ್ರಾಥಮಿಕ/ದ್ವಿತೀಯ ಸಂಪರ್ಕಗಳು-1993

ಇವುಗಳಲ್ಲಿ ಪಾಸಿಟಿವ್ ಪ್ರಕರಣಗಳು 323, ನೆಗೆಟಿವ್ ವರದಿ ಬಂದ ಪ್ರಕರಣಗಳು 12920 ಆಗಿದೆ. 384 ಪ್ರಕರಣಗಳಲ್ಲಿ ವರದಿಯನ್ನು ನಿರೀಕ್ಷಿಸಲಾಗುತ್ತಿದೆ, ಈಗಾಗಲೇ ಐವರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ದಾಖಲಿರುವ ಪ್ರಕರಣಗಳು:

ಕೋವಿಡ್ ಆಸ್ಪತ್ರೆ : 34
ಕೋವಿಡ್ ಕೇರ್ ಸೆಂಟರ್ :27
ಹೋಂ ಐಸೋಲೇಶನ್ : 11