ಇ-ಮಾರುಕಟ್ಟೆ : ಸುಪ್ರೀಂ ನೋಟಿಸ್

25/07/2020

ನವದೆಹಲಿ ಜು.25 : ಇ-ಮಾರುಕಟ್ಟೆಯಲ್ಲಿ ಮಾರಾಟವಾಗುವ ಉತ್ಪನ್ನಗಳ ಮೂಲ ದೇಶದ ಮಾಹಿತಿ ಕಡ್ಡಾಯಗೊಳಿಸುವ ಸಂಬಂಧ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಇ-ಮಾರುಕಟ್ಟೆಯಲ್ಲಿ ಮಾರಾಟವಾಗುವ ಉತ್ಪನ್ನಗಳ ಮೂಲ ದೇಶದವನ್ನು ನಮೂದಿಸುವುದರ ಬಗ್ಗೆ ಕಾನೂನು ಜಾರಿಗೊಳಿಸುವುದರ ಸಂಬಂಧ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನೊಟೀಸ್ ಜಾರಿಗೊಳಿಸಿದೆ.
ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎಸ್‍ಎ ಬೋಬ್ಡೆ, ವಿ ರಾಮಸುಬ್ರಹ್ಮಣಿಯನ್ ಅವರಿದ್ದ ಪೀಠ ಉತ್ಪನ್ನಗಳ ಮೂಲಗಳನ್ನು ನಮೂದಿಸುವುದಕ್ಕೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸುತ್ತಿತ್ತು.