ರಾಮಮಂದಿರ ಭೂಮಿ ಪೂಜೆಗೆ ವಿಘ್ನ

25/07/2020

ನವದೆಹಲಿ ಜು.25 : ಅಯೋಧ್ಯೆಯಲ್ಲಿ ಆ.5 ರಂದು ನಡೆಯಲಿರುವ ರಾಮ ಮಂದಿರ ಭೂಮಿ ಪೂಜೆಗೆ ಮತ್ತೊಂದು ವಿಘ್ನ ಎದುರಾಗಿದ್ದು, ಭೂಮಿ ಪೂಜೆ ಕಾರ್ಯಕ್ರಮಕ್ಕೆ ತಡೆ ಕೋರಿ ಅಲಹಾಬಾದ್ ಹೈಕೋರ್ಟ್ ನಲ್ಲಿ ಸಾರ್ವಜನಿಕಿ ಹಿತಾಸಕ್ತಿ ಅರ್ಜಿ ದಾಖಲಿಸಲಾಗಿದೆ.
ಆಗಸ್ಟ್5 ರಂದು ಭವ್ಯವಾದ ಮಂದಿರ ಭೂಮಿ ಪೂಜೆ ಕಾರ್ಯಕ್ರಮ ನಡೆಯಲಿದೆ. ಈ ಪೂಜೆ ಮೂರು ದಿನಗಳ ಸುದೀರ್ಘ ವೈದಿಕ ಆಚರಣೆಗಳ ಮೂಲಕ ನಡೆಯಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ 40 ಕೆಜಿ ಬೆಳ್ಳಿ ಇಟ್ಟಿಗೆಯನ್ನು ಅಡಿಪಾಯಕ್ಕೆ ಅಳವಡಿಸುವ ಮೂಲಕ ದೇಗುಲ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ.
ಇದೇ ರಾಮಮಂದಿರ ಭೂಮಿ ಪೂಜೆ ಕಾರ್ಯಕ್ರಮ ಕೋವಿಡ್-19 ನಿಯಮಾವಳಿಗಳ ಉಲ್ಲಂಘನೆಯಾಗಿದ್ದು ಕೂಡಲೇ ಭೂಮಿ ಪೂಜೆ ಕಾರ್ಯಕ್ರಮಕ್ಕೆ ತಡೆ ನೀಡಬೇಕು ಎಂದು ದೆಹಲಿ ಮೂಲದ ಪತ್ರಕರ್ತರೊಬ್ಬರು ಹೈಕೋರ್ಟ್‍ಗೆ ಪಿಐಎಲ್‍ಸಲ್ಲಿಸಿದ್ದಾರೆ.
ದೇಶದಲ್ಲಿ ಕೊರೊನಾ ವೈರಸ್ ತೀವ್ರಗತಿಯಲ್ಲಿ ಹಬ್ಬುತ್ತಿರುವ ನಡುವೆಯೇ ಕಾರ್ಯಕ್ರಮ ಆಯೋಜಿಸಲಾಗಿದೆ. ಇದು ಕೇಂದ್ರ ಸರ್ಕಾರಕದ ಅನ್‍ಲಾಕ್ 2.0 ಮಾರ್ಗಸೂಚಿಯನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಅರ್ಜಿಯಲ್ಲಿ ಹೇಳಿದ್ದಾರೆ. ಅಂತೆಯೇ ಕೊರೋನಾ ವೈರಸ್‍ಸಮಯದಲ್ಲಿ ಕಾರ್ಯಕ್ರಮ ನಡೆಯವುದು ಬೇಡ ಎಂದಿರುವ ಅರ್ಜಿದಾರ, ಭೂಮಿ ಪೂಜೆಗೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.