ಚಿತ್ರರಂಗಕ್ಕೆ ಶಿವರಾಜ್ ಕುಮಾರ್ ನಾಯಕತ್ವ

25/07/2020

ಬೆಂಗಳೂರು ಜು.24 : ರೆಬೆಲ್ ಸ್ಟಾರ್ ಅಂಬರೀಷ್ ನಿಧನದ ನಂತರ ಕನ್ನಡ ಚಿತ್ರೋದ್ಯಮದ ನಾಯಕತ್ವವನ್ನು ಯಾರು ವಹಿಸಿಕೊಳ್ಳಬೇಕೆಂಬ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಜೋರಾದ ಚರ್ಚೆ ನಡೆಯುತಿತ್ತು.
ಅಂಬರೀಷ್ ಅವರು ನಿಧನರಾಗಿ ಒಂದೂವರೆ ವರ್ಷದ ಬಳಿಕ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಸ್ಯಾಂಡಲ್ ವುಡ್ ನಾಯಕತ್ವ ವಹಿಸಿಕೊಂಡಿದ್ದಾರೆ.
ಕೋವಿಡ್ 19 ನಿಂದಾಗಿ ಸಂಕಷ್ಟದಲ್ಲಿರುವ ಕನ್ನಡ ಚಿತ್ರರಂಗದ ವಿಷಯವಾಗಿ, ಎಲ್ಲ ವಿಭಾಗಗಳ ಪುನಶ್ಚೇತನದ ಬಗ್ಗೆ ಚರ್ಚಿಸಲು ಶುಕ್ರವಾರ ಮಧ್ಯಾಹ್ನ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ನಿವಾಸದಲ್ಲಿ ಸಭೆ ನಡೆಸಲಾಯಿತು.
ಕಲಾವಿದರ ಸಂಘ, ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘದ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.ಕನ್ನಡ ಚಿತ್ರರಂಗದ ಸಂಕಷ್ಟಗಳನ್ನು ಸರ್ಕಾರದ ಮುಂದಿಡಲು, ಸಮಸ್ಯೆಗಳನ್ನು ಬಗೆಹರಿಸಲು ನಾಯಕತ್ವದ ಅಗತ್ಯವಿದ್ದು, ಶಿವರಾಜ್ ಕುಮಾರ್ ನಾಯಕತ್ವ ವಹಿಸಲು ಸಭೆ ಸಮ್ಮತಿಸಿತು.