ಕೊರೋನಾದಿಂದ ಗುಣಮುಖರಾದ ಪೊಲೀಸ್ ಅಧಿಕಾರಿಗಳಿಗೆ ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯಿಂದ ಸ್ವಾಗತ

25/07/2020

ಮಡಿಕೇರಿ ಜು. 25 : ಕೊಡಗು ಜಿಲ್ಲಾ ಪೊಲೀಸ್ ಘಟಕದ ಎ.ಹೆಚ್.ಸಿ ಅಶೋಕ್, ಡಿಎಆರ್ ಮತ್ತು ಪ್ರೊ.ಪಿ.ಎಸ್.ಐ ಜಗದೀಶ್ ಧೂಳಶೆಟ್ಟಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಪೂರ್ಣ ಗುಣಮುಖರಾಗಿ ಕರ್ತವ್ಯಕ್ಕೆ ಮರಳಿದ್ದು, ಅವರುಗಳಿಗೆ ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲಾ ಪೊಲೀಸ್ ಕಛೇರಿ ಆವರಣದಲ್ಲಿ ಸ್ವಾಗತ ಕೋರಲಾಯಿತು.

ಈ ಸಂದರ್ಭದಲ್ಲಿ ಮಡಿಕೇರಿ ಉಪ ವಿಭಾಗದ ಡಿ.ವೈ.ಎಸ್.ಪಿ ಬಿ.ಪಿ.ದಿನೇಶ್ ಕುಮಾರ್, ಡಿಎಆರ್ ಪೊಲೀಸ್ ನಿರೀಕ್ಷಕರಾದ ಎಸ್. ರಾಚಯ್ಯ ಹಾಗು ಇತರೆ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದು ಸ್ವಾಗತಿಸಿದರು.