ಟಾಸ್ಕ್ ಫೋರ್ಸ್ ಸಮಿತಿ ಸಕ್ರಿಯವಾಗಲು ಶಾಸಕ ಕೆ.ಜಿ.ಬೋಪಯ್ಯ ಸೂಚನೆ

26/07/2020

ಮಡಿಕೇರಿ ಜು.26 : ಕೊರೋನಾ ನಿರ್ವಹಣೆಗಾಗಿ ರಚನೆಗೊಂಡಿರುವ ಗ್ರಾಮ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸದಾ ಸಕ್ರಿಯವಾಗಿರಬೇಕು ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅವರು ಸೂಚನೆ ನೀಡಿದ್ದಾರೆ.
ಮಡಿಕೇರಿ ತಾ.ಪಂ ಸಭಾಂಗಣದಲ್ಲಿ ನಡೆದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಅಂತರ್ಜಾಲದ ಮೂಲಕ ನೇರ ಪ್ರಸಾರದಲ್ಲಿ ಸಮಿತಿ ಸದಸ್ಯರೊಂದಿಗೆ ಚರ್ಚಿಸಿದರು. ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಲಕ್ಷ್ಮೀ, ತಹಶೀಲ್ದಾರ್ ಮಹೇಶ್ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.