ಯೋಧರ ಬಲಿದಾನ ಸ್ಮರಿಸಿದ ಪ್ರಧಾನಿ

27/07/2020

ನವದೆಹಲಿ ಜು.27 : ಕಾರ್ಗಿಲ್ ಯುದ್ಧದಲ್ಲಿ ಭಾರತ ಪಾಕಿಸ್ತಾನ ಮಣಿಸಿದ ಐತಿಹಾಸಿಕ ದಿನಕ್ಕಿಂದು 21 ವರ್ಷ ತುಂಬಿದ್ದು, 21 ವರ್ಷಗಳ ಹಿಂದೆ ಇದೇ ದಿನ ನಾವು ಪಾಕಿಸ್ತಾನದ ವಿರುದ್ಧ ವಿಜಯ ಸಾಧಿಸಿದ್ದೆವು. ಕಾರ್ಗಿಲ್ ಯುದ್ಧದಿಂದ ನಮ್ಮ ಯೋಧರ ಶಕ್ತಿ ಇಡೀ ವಿಶ್ವಕ್ಕೇ ಪರಿಚಯವಾಗಿದೆ ಎಂದು ಕಾರ್ಗಿಲ್ ವಿಜಯ ದಿವಸ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಯೋಧರ ಬಲಿದಾನವನ್ನು ಸ್ಮರಿಸಿದ್ದಾರೆ.
ಇಂದು ಕಾರ್ಗಿಲ್ ವಿಜಯ ದಿವಸ. ಕಾರ್ಗಿಲ್ ಹುತಾತ್ಮ ಯೋಧರಿಗೆ ನನ್ನ ಧನ್ಯವಾದಗಳು. 21 ವರ್ಷಗಳ ಹಿಂದೆ ಇದೇ ದಿನ ನಾವು ಪಾಕಿಸ್ತಾನದ ವಿರುದ್ಧ ವಿಜಯ ಸಾಧಿಸಿದ್ದೇವೆ. ದೇಶದ ವಿವಿಧೆಡೆ ಹುತಾತ್ಮ ಯೋಧರಿಗೆ ನಮನ ಸಲ್ಲಿಸುತ್ತಿದ್ದಾರೆ. 21 ವರ್ಷಗಳ ಹಿಂದೆ ಈ ದಿನ ಸೈನ್ಯವರು ಕಾರ್ಗಿಲ್ ಯುದ್ಧವನ್ನು ಗೆದ್ದಿತು. ಆಗ ಭಾರತ ಪಾಕಿಸ್ತಾನದೊಂದಿಗೆ ಸೌಹಾರ್ದಯುತ ಸಂಬಂಧವನ್ನು ಹೊಂದಲು ಪ್ರಯತ್ನಿಸುತ್ತಿತ್ತು. ಆದರೆ, ಒಂದು ಮಾತಿದೆ, ವಿನಾ ಕಾರಣ ಎಲ್ಲರೊಂದಿಗೂ ದ್ವೇಷ ಸಾಧಿಸುವುದು ದುಷ್ಟರ ಸ್ವಭಾವ ಎಂದು ಹೀಗೆ ಹೇಳುವ ಮೂಲಕ ವಿಜಯ್ ದಿವಸ್ ನೆನೆಯುತ್ತಲೇ ಪಾಕಿಸ್ತಾನಕ್ಕೆ ಚಾಟಿ ಬೀಸಿದರು.
ಭಾರತದ ಭೂಮಿಯನ್ನು ವಶಪಡಿಸಿಕೊಳ್ಳಲು ಮತ್ತು ಅದರ ಆಂತರಿಕ ಸಂಘರ್ಷದಿಂದ ಅಲ್ಲಿನ ಜನರ ದೃಷ್ಟಿಯನ್ನು ಬೇರೆ ಕಡೆಗೆ ಸೆಳೆಯುವ ತಂತ್ರದ ಭಾಗವಾಗಿ ಪಾಕಿಸ್ತಾನ ದುಷ್ಕೃತ್ಯ ಎಸಗಿತ್ತು ಎಂದು ಹೇಳಿದರು.