ರಾಜ್ಯದ ಸೋಂಕಿತರ ಸಂಖ್ಯೆ 96 ಸಾವಿರ

July 27, 2020

ಬೆಂಗಳೂರು ಜು.27: ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆರ್ಭಟ ಮುಂದುವರಿದಿದೆ. ಕಳೆದ ನಾಲ್ಕು ದಿನಗಳಿಂದ ದಿನವೊಂದರಲ್ಲಿ ಐದು ಸಾವಿರಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರಿಂದ ರಾಜ್ಯದ ಸೋಂಕಿತರ ಸಂಖ್ಯೆ ಬರೋಬ್ಬರಿ 96 ಸಾವಿರದ ಗಡಿ ತಲುಪಿದೆ.
ಭಾನುವಾರ ರಾಜ್ಯದಲ್ಲಿ ಒಟ್ಟು 5199 ಪ್ರಕರಣಗಳು ವರದಿಯಾಗಿದ್ದು, 82 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 96,141ಕ್ಕೇರಿಕೆಯಾಗಿದೆ. ಮೃತರ ಸಂಖ್ಯೆ 1878ಕ್ಕೆ ಏರಿಕೆಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ತಿಳಿಸಿದ್ದಾರೆ.
ಇಂದು ರಾಜಧಾನಿ ಬೆಂಗಳೂರು ನಗರದಲ್ಲಿ 1950 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 43503ಕ್ಕೇರಿಕೆಯಾಗಿದೆ. ಬೆಂಗಳೂರಿನಲ್ಲಿ ಮಹಾಮಾರಿಗೆ ಇಂದು 29 ಮಂದಿ ಬಲಿಯಾಗಿದ್ದಾರೆ.

error: Content is protected !!