ಯೋಧರಿಗೆ ಗೌರವ ಸಲ್ಲಿಸಿದ ಸಿಎಂ

27/07/2020

ಬೆಂಗಳೂರು ಜು.26 : ಕಾರ್ಗಿಲ್ ವಿಜಯ ದಿವಸದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಇಡೀ ದೇಶ ಇಂದು ಕಾರ್ಗಿಲ್ ವಿಜಯ ದಿವಸವನ್ನು ಆಚರಿಸುತ್ತಿದೆ. ದೇಶಕ್ಕಾಗಿ ಹುತಾತ್ಮರಾದ ಎಲ್ಲ ಭಾರತೀಯ ಸೈನಿಕರಿಗೂ ಇಂದು ವಿಶೇಷವಾಗಿ ನಮ್ಮ ಗೌರವ ನಮನಗಳನ್ನು ಸಲ್ಲಿಸೋಣ. ಭಾರತೀಯ ಸೇನಾಪಡೆಗಳ ವೀರಯೋಧರಿಗೆ ಮತ್ತು ಅವರ ಕುಟುಂಬದವರಿಗೆ ಬೆಂಬಲ ಹಾಗೂ ಹೆಮ್ಮೆಯ ಅಭಿನಂದನೆಗಳನ್ನು ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.
ಈ ಕಾರ್ಗಿಲ್ ವಿಜಯ ದಿವಸದಂದು ದೇಶಕ್ಕಾಗಿ ಹುತಾತ್ಮರಾದ ಎಲ್ಲ ಭಾರತೀಯ ಸೈನಿಕರಿಗೂ ನಮ್ಮ ಗೌರವ ನಮನಗಳನ್ನು ಸಲ್ಲಿಸೋಣ. ಭಾರತದ ಏಕತೆ, ಸಾರ್ವಭೌಮತೆಗಳನ್ನು ಸಂಭ್ರಮಿಸುವ ಜೊತೆಗೆ ಭಾರತೀಯ ಸೇನಾಪಡೆಗಳ ವೀರಯೋಧರಿಗೆ ಮತ್ತು ಅವರ ಕುಟುಂಬದವರಿಗೆ ಬೆಂಬಲ ಹಾಗೂ ಹೆಮ್ಮೆಯ ಅಭಿನಂದನೆಗಳನ್ನು ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು, ದೇಶ ರಕ್ಷಣೆಗಾಗಿ ಹುತಾತ್ಮರಾದ ಎಲ್ಲ ವೀರ ಯೋಧರಿಗೆ ಸಲಾಂ ಹೇಳೋಣ. ಅವರ ತ್ಯಾಗ ಬಲಿದಾನಗಳನ್ನು ಸ್ಮರಿಸೋಣ ಎಂದು ಟ್ವೀಟ್ ಮಾಡಿದ್ದಾರೆ.